May 6, 2026

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ:
ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರ

0
IMG-20240118-WA0000.jpg

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!