ಕಾರು, ಟ್ಯಾಂಕರ್ ನಡುವೆ ಭೀಕರ ಅಪಘತ: ಮೂವರು ಮೃತ್ಯು
ಚಿತ್ರದುರ್ಗ: ಕಾರು ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತಕ್ಕೆ ಮೂವರು ಬಲಿಯಾದ ಘಟನೆ ಚಿತ್ರದುರ್ಗದ ಮದಕರಿಪುರ ಸೇತುವೆ ಬಳಿ ನಡೆದಿದೆ.
ಬೆಂಗಳೂರು ಮೂಲದ ನಿವಾಸಿಗಳು ನಿರ್ಮಲ (55), ವಿನುತ (40), ಯಶಸ್(2) ಮೃತರು ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಮದಕರಿಪುರ ಹೊಸ ಹೈವೆ ಬ್ರೀಡ್ಜ್ ಬಳಿ ಅಪಘಾತ ನಡೆದಿದೆ.
ಅಪಘಾತದದಲ್ಲಿ ಫಣಿರಾಜು(37), ರಶ್ಮಿ (27) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಕಡೆಯಿಂದ ಹೊಸಪೇಟೆ ಕಡೆ ಹೋಗುವ ವೇಳೆ ಅಪಘಾತ ನಡೆದಿದ್ದು, ಗಾಯಾಳುಗಳನ್ನು ಬಸವೇಶ್ವರ ಆಸ್ಪತ್ರೆಗೆ ಸೇರಿಸಲಾಗಿದೆ.
ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





