ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮನೆಯ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಿಖರ ಮಾಹಿತಿ ತಿಳಿದುಬಂದಿಲ್ಲ.
ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





