ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ
ಬೆಂಗಳೂರು: ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?, ಬೇಕಿದ್ದರೆ ಬಂಧಿಸಿ ಇನ್ನು ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಪ್ರಸಾದ್ ಕಿಡಿಕಾರಿದ್ದಾರೆ.
ವಿಚಾರಣೆಗೆ ಒಳಪಡಿಸುವಂತೆ ನಿರ್ದೇಶನ ನೀಡಿರುವ ಸರ್ಕಾರದ ನಡೆಗೆ ಹರಿಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?.. ನನಗೆ ವಿವಿಐಪಿ ಟ್ರೀಟ್ಮೆಂಟ್ ಬೇಡ, ಬೇಕಿದ್ದರೆ ಅರೆಸ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ಅವರನ್ನು ಇಂದು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಈ ನಿಲುವಿನಿಂದ ತಮ್ಮದ ಪಕ್ಷದ ಸರ್ಕಾರದ ವಿರುದ್ಧ ಹರಿಪ್ರಸಾದ್ ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ? ಕಿಡಿಕಾರಿದ್ದಾರೆ.





