August 12, 2026

ಕಲ್ಲಡ್ಕ ಪ್ರಭಾಕರ ಭಟ್ ಪರ ವಕಾಲತ್ತು ವಹಿಸಿ ಜಾಮೀನು ಕೊಡಿಸಲು ಸಹಕಾರ ವಕೀಲ ಚಂದ್ರೇಗೌಡ ಕಾಂಗ್ರೆಸ್‍ನಿಂದ ಉಚ್ಚಾಟನೆ

0
image_editor_output_image-362892117-1705654563087.jpg

ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣದ ಆರೋಪಿ ಆರಸ್ಸೆಸ್ ಮುಖಂಡ ಪ್ರಭಾಕರ ಭಟ್ ಪರ ವಕಾಲತ್ತು ವಹಿಸಿರುವ ವಕೀಲ ಡಿ.ಚಂದ್ರೇಗೌಡ ಅವರನ್ನು ಶ್ರೀರಂಗಪಟ್ಟಣ ತಾಲೂಕು ಕಾಂಗ್ರೆಸ್‍ನ ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಭಾಷಣ ಮಾಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಡಿ.ಚಂದ್ರೇಗೌಡ ನಿರೀಕ್ಷಣಾ ಜಾಮೀನು ಕೊಡಿಸಿದ್ದಾರೆ. ಇದು ಪಕ್ಷದ ಕಾನೂನು ಘಟಕದ ನಿಯಮ, ನಿಬಂಧನೆಗಳಿಗೆ ವಿರುದ್ಧವಾಗಿರುವ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ಜಿಲ್ಲಾಧ್ಯಕ್ಷ ಎ.ಎಸ್.ಗೌರಿಶಂಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!