March 19, 2026

ಕರ್ನಾಟಕದಲ್ಲಿ ಇಂದು ಕೊರೋನಾ ಇಳಿಮುಖ: 89 ಪಾಸಿಟಿವ್ ಪ್ರಕರಣ ಪತ್ತೆ, ಒಬ್ಬರ ಸಾವು

0
IMG-20240115-WA0022.jpg


ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಇಂದು 89 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಪಾಸಿಟಿವಿಟಿ ದರ ಶೇ. 2.66ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 3,336 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದ್ದು, 16 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 89 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 497ಕ್ಕೆ ಇಳಿಕೆಯಾಗಿದೆ.

ಇನ್ನು ಸೋಂಕಿತರಲ್ಲಿ 466 ಮಂದಿ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದಾರೆ, 31 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 2 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದು, ಇಂದು ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.”

Leave a Reply

Your email address will not be published. Required fields are marked *

error: Content is protected !!