March 19, 2026

ಶಿವಮೊಗ್ಗ: ಮುಸ್ಲಿಮ್ ಮಹಿಳೆಯನ್ನು ನೋಡಿ ‘ಜೈ ಶ್ರೀರಾಮ್’ ಘೋಷಣೆಗೆ ಕೂಗಿದ ಬಿಜೆಪಿ ಕಾರ್ಯಕರ್ತರು: ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಮುಸ್ಲಿಮ್ ಮಹಿಳೆ ಪೊಲೀಸ್ ವಶಕ್ಕೆ

0
image_editor_output_image1235969399-1705909566357.jpg

ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿನ ಶಿವಪ್ಪ ನಾಯಕ ವೃತ್ತದಲ್ಲಿ ಸೋಮವಾರ ಬಿಜೆಪಿ ಜಿಲ್ಲಾ ಘಟಕದಿಂದ ಸಾರ್ವಜನಿಕರಿಗೆ ಸಿಹಿ ಹಂಚಿಕೆ, ಸಂಭ್ರಮಾಚರಣೆ ನಡೆಯಿತು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಮುಸ್ಲಿಮ್ ಮಹಿಳೆಯನ್ನು ನೋಡಿ ‘ಜೈ ಶ್ರೀರಾಮ್’ ಘೋಷಣೆಗೆ ಪ್ರತಿಯಾಗಿ ಅಲ್ಲಿದ್ದ ಮುಸ್ಲಿಂ ಮಹಿಳೆಯೊಬ್ಬರು ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದರು. ಇದು ಕೆಲಕಾಲ ಸ್ಥಳದಲ್ಲಿ ಗೊಂದಲ ಸೃಷ್ಟಿಸಿತು.

ಘೋಷಣೆ ಕೂಗಿದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಕೋಟೆ ಪೊಲೀಸ್ ಠಾಣೆಗೆ ಕರೆದೊಯ್ದರು.

ಬಿಜೆಪಿಯ ಗುಂಪು ‘ಜೈಶ್ರೀರಾಮ್’ ಘೋಷಣೆ ಕೂಗತೊಡಗಿ ಆಕೆಯ ಹಿಂದೆ ತೆರಳಿತು. ಇದರಿಂದ ಕೆಲಕಾಲ ಶಿವಪ್ಪ ನಾಯಕ ವೃತ್ತದಲ್ಲಿ ಗೊಂದಲವೇರ್ಪಟ್ಟಿತು. ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಠಾಣೆಗೆ ಕರೆದೊಯ್ದರು.

Leave a Reply

Your email address will not be published. Required fields are marked *

error: Content is protected !!