March 19, 2026

ಶಿವಮೊಗ್ಗ: ಹೋರಿಯ ತಿವಿತಕ್ಕೊಳಗಾಗಿ ಮೃತಪಟ್ಟ ಯುವಕ

0
image_editor_output_image2027918675-1705910024452.jpg

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ಯುವಕನೊಬ್ಬನಿಗೆ ಹೋರಿಯ ತಿವಿತಕ್ಕೊಳಗಾಗಿ ಮೃತಪಟ್ಟ ಘಟನೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಈಸೂರು ಗ್ರಾಮದ ನಿವಾಸಿ ಪರಶುರಾಮ(27) ಎಂದು ಗುರುತಿಸಲಾಗಿದೆ.

ತರಲಘಟ್ಟ ಗ್ರಾಮದಲ್ಲಿ ರವಿವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭ ಪರಶುರಾಮನಿಗೆ ಹೋರಿ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!