ಅಯೋಧ್ಯೆ: ಶಾಸ್ತ್ರೋಕ್ತವಾಗಿ ನೆರವೇರಿದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ
ಅಯೋಧ್ಯೆ: ಶಾಸ್ತ್ರೋಕ್ತವಾಗಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಯೋಧ್ಯೆ ರಾಮ ಮಂದಿರದಲ್ಲಿ ಜರುಗಿದೆ.
ಅರ್ಚಕರು, ಪಂಡಿತರು ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಿದರು.
ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ ಮೋದಿ ರಾಮನ ಪಾದಗಳಿಗೆ ಪುಷ್ಪ ಅರ್ಚಿಸಿ ಪ್ರಾರ್ಥನೆಗೈದರು.
ಬಳಿಕ ಪ್ರಧಾನಿ ಮೋದಿ, ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಅವರು ಆರತಿ ಬೆಳಗಿದರು. ಈ ವೇಳೆ ದೇವಾಲಯದ ಒಳಗೆ ನೆರೆದವರ ಶ್ರೀ ರಾಮ ಜಯರಾಮ ಎಂಬ ರಾಮನಾಮ ಮುಗಿಲುಮುಟ್ಟಿತ್ತು. ವಾದ್ಯಗಳ ನಾದ ದೇವಾಲಯವನ್ನು ಆವರಿಸಿತ್ತು.
ಈ ವೇಳೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗುಜರಾತ್ ಮಾಜಿ ಸಿಎಂ ಆನಂದಿಬೇನ್ ಪಟೇಲ್, ಇಬ್ಬರು ಪ್ರಧಾನ ಅರ್ಚಕರು ಇದ್ದರು.
ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ರಾಮ್ ಲಲ್ಲಾನ ವಿಗ್ರಹವನ್ನು ಅನಾವರಣಗೊಳಿಸುತ್ತಿದ್ದಂತೆ ಭಾರತೀಯ ವಾಯುಪಡೆ (ಐಎಎಫ್) ಹೆಲಿಕಾಪ್ಟರ್‌ಗಳು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ ಮೇಲೆ ಹೂವಿನ ಮಳೆಗೈದವು.
ಕನ್ನಡಿಗ ಅರುಣ್ ಯೋಗಿರಾಜ್ ಕೆತ್ತಿದ ಬಾಲರಾಮನ ಮೂರ್ತಿ ಇಂದು ಅಯೋಧ್ಯೆಯಲ್ಲಿ ಸ್ಥಾಪನೆಗೊಂಡಿದೆ.




