ಶಾಲೆಗೆ ಹೋಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು
ಮಂಡ್ಯ: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿ ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.