March 18, 2026

ಪುತ್ತೂರು: ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಘಪರಿವಾರದ ಮುಖಂಡನಿಗೆ ಗಡಿಪಾರು ಆದೇಶ

0
image_editor_output_image667369331-1706000740959.jpg

ಪುತ್ತೂರು: ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ, ಸಂಘಪರಿವಾರದ ಮುಖಂಡ ಅವಿನಾಶ್ ಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಕರ್ನಾಟಕ ಪೊಲೀಸ್ ಅಧಿನಿಯಮ-1963 ರ ಕಲಂ:55 ಪ್ರಕಾರ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ.24ರಂದು ಪೂರ್ವಾಹ್ನ :11.00 ಘಂಟೆಗೆ ವಿಚಾರಣೆ ನಡೆಯಲಿದೆ.

ವಿಚಾರಣೆಗೆ ಸಂಬಂಧಪಟ್ಟಂತೆ ಅವಿನಾಶ್ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ಅವಿನಾಶ್ ಗೆ ತಿಳಿಸಲಾಗಿದೆ.

ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!