March 19, 2026

ಬಂಡೆಕಲ್ಲು‌ ಗಣಿಗಾರಿಕೆಯಲ್ಲಿ ಬ್ಲಾಸ್ಟ್: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

0
image_editor_output_image1005882658-1706079263459.jpg

ತುಮಕೂರು: ಬಂಡೆ ಬ್ಲಾಸ್ಟ್ ಮಾಡುವ ವೇಳೆ ಅವಘಡವೊಂದು ಸಂಭವಿಸಿದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

ಮೃತರನ್ನು ಬಿಹಾರ ಮೂಲದ ಮೊಹಮ್ಮದ್ ಅಬೂಲ್ (29) ಹಾಗೂ ಛತ್ತೀಸ್‌ಗಢ ಮೂಲದ ಮೋನು (24) ಎಂದು ಗುರುತಿಸಲಾಗಿದೆ. ತುಮಕೂರು ತಾಲೂಕಿನ ಕೌತಮಾರನಹಳ್ಳಿ ಬಳಿಯಿರುವ ಕರ್ನಾಟಕ ಸ್ಟೋನ್ ಕ್ರಷರ್‌ನಲ್ಲಿ ಘಟನೆ ನಡೆದಿದೆ.

ಈ ಕ್ರಷರ್ ತುಮಕೂರು ಮೂಲದ ಕೆ.ಎ.ಎಂ ಹನೀಫ್ ಎಂಬವರಿಗೆ ಸೇರಿದ್ದು, ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಕ್ರಷರ್‌ನಲ್ಲಿ ಬಂಡೆಗೆ ಡ್ರಿಲ್ ಮಾಡಲು ಬೆಟ್ಟ ಹತ್ತಿದ ಇಬ್ಬರು ಕಾರ್ಮಿಕರು ಆಯತಪ್ಪಿ ಸುಮಾರು 100 ಅಡಿ ಎತ್ತರದಿಂದ ಪ್ರಪಾತಕ್ಕೆ ಬಿದ್ದು ಜೀವತೆತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!