ವಿಟ್ಲ: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ
ವಿಟ್ಲ: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಬುಧವಾರ ಮಧ್ಯಾಹ್ನ ಮುಡಿಪು ಬಳಿಯ ನಿವಾಸದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಯಕ್ಷಗಾನ ಕ್ಷೇತ್ರದಲ್ಲಿ ಮುಂಚೂಣಿಯ ಕಲಾವಿದರಾಗಿ ಐವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪೆರುವಾಯಿ ನಾರಾಯಣ ಶೆಟ್ಟಿಯವರು ಜಾಬಾಲಿ, ಅರುಣಾಸುರ, ರಕ್ತಬೀಜ, ಕೌರವ, ಕರ್ಣ, ಅರ್ಜುನ, ಅತಿಕಾಯ, ಇಂದ್ರಜಿತು, ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಸಾಧಕ.
ಬಂಟ್ವಾಳ ತಾಲೂಕು ಪೆರುವಾಯಿಯಲ್ಲಿ ಜನಿಸಿದ ನಾರಾಯಣ ಶೆಟ್ಟಿ ಅವರು ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಯ ಸುಪುತ್ರ.