May 11, 2026

ಕುಂದಾಪುರ : ಬೈಕ್ ಕಳವು ಪ್ರಕರಣ: ಆರೋಪಿ ಪೊಲೀಸರ ವಶಕ್ಕೆ

0
sp-362056426-bhgmct-thumbnail.jpg


 
ಕುಂದಾಪುರ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಯನ್ನು ಕುಂದಾಪುರ ಪೊಲೀಸರು ಬೈಂದೂರು ಜಂಕ್ಷನ್ ಬಳಿ ಬಂಧಿಸಿದ್ದಾರೆ.

ಬೈಂದೂರು ತಾಲೂಕಿನ ಕಾಲ್ಲೋಡು ಗ್ರಾಮದ ರಂಜಿತ್ ಪೂಜಾರಿ (25) ಬಂಧಿತ ಆರೋಪಿ.

ಕುಂದಾಪುರ ಶಾಸ್ತ್ರಿ ವೃತ್ತದ ಬಳಿಯ ಕಾಲೇಜು ರಸ್ತೆಯ ಸರಕಾರಿ ನೌಕರರ ಸಂಘದ ಕಟ್ಟಡದ ಬಳಿ ಅನಂತ ಎಂಬವರು ನ.26ರಂದು ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ ಸುಮಾರು 5ಕ್ಕೂ ಹೆಚ್ಚು ಬೈಕ್ ಕಳ್ಳತನ ಪ್ರಕರಣಗಳು ದಾಖಲಾಗಿದೆ ಎಂದು ತನಿಖೆ ವೇಳೆ ತಿಳಿದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!