August 25, 2026

ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ: 30 ಗಂಟೆಯಲ್ಲೇ ಹಂತಕನನ್ನು ಬಂಧಿಸಿದ ಪೊಲೀಸರು

0
image_editor_output_image1406583598-1706169213705.jpg

ಮಂಡ್ಯ: ಇಲ್ಲಿನ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಪೊಲೀಸರು ಹಂತಕನನ್ನು ಬಂಧಿಸಿದ್ದಾರೆ. ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ನಿತೀಶ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು, ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು.

ಇದಾದ ನಂತರ ಮೇಲುಕೋಟೆ ಠಾಣೆಗೆ ದೀಪಿಕಾ ಪೋಷಕರು ನಾಪತ್ತೆ ದೂರು ನೀಡಿದ್ದರು. ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು.

Leave a Reply

Your email address will not be published. Required fields are marked *

error: Content is protected !!