March 21, 2026

ಬೆಂಗಳೂರು: ನನ್ನ ನಿಲುವು ಸ್ಪಷ್ಟವಾಗಿದೆ: ನಾನು ಮತ್ತೆ ಬಿಜೆಪಿಗೆ ಹೋಗಲ್ಲ: ಶಾಸಕ ಲಕ್ಷ್ಮಣ್ ಸವದಿ

0
laxman-savadi.jpg

ಬೆಂಗಳೂರು: ನನ್ನ ನಿಲುವು ಸ್ಪಷ್ಟವಾಗಿದೆ. ನಾನು ಮತ್ತೆ ಬಿಜೆಪಿಗೆ ಹೋಗಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರಿರುವ ಬೆನ್ನಲ್ಲೇ ಸವದಿ ಕೂಡ ಸೇರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಮತ್ತು ಶೆಟ್ಟರ್ ಒಟ್ಟಿಗೆ ನಿರ್ಧಾರ ಮಾಡಿರಲಿಲ್ಲ. ನಾನು ಮೊದಲು ಕಾಂಗ್ರೆಸ್‍ಗೆ ಬಂದೆ. ಟಿಕೆಟ್ ಸಿಗದ ಕಾರಣ ಅವರು ನಂತರ ಬಂದರು. ಯಾಕೆ ಹೋಗಿದ್ದಾರೆ ಅಂತ ಗೊತ್ತಿಲ್ಲ ಎಂದರು.

ಇನ್ನು ನನ್ನನ್ನ ಬಿಜೆಪಿ ಸಂಪರ್ಕ ಮಾಡಿಲ್ಲ, ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಲೋಕಸಭೆ ಅಗತ್ಯ, ಅನಿವಾರ್ಯ ಇದೆ. ಹಾಗಾಗಿ ಎಲ್ಲರನ್ನ ಸಂಪರ್ಕ ಮಾಡುತ್ತಿದ್ದಾರೆ. ನಾನು ಎಲ್ಲೂ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶೆಟ್ಟರ್ ಹೋಗಿರೋದು ದೊಡ್ಡ ಬದಲಾವಣೆ ಆಗೋದಿಲ್ಲ ಅನಿಸುತ್ತೆ. ಶೆಟ್ಟರ್ ವೈಯಕ್ತಿಕ ವಿಚಾರವಾಗಿ ನಿರ್ಧಾರ ಮಾಡಿದ್ದಾರೆ. ನನ್ನ ನಿರ್ಧಾರ ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!