February 4, 2026

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

0
IMG-20240125-WA0030.jpg


ಬೆಂಗಳೂರು: 75ನೇ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಸಂವಿಧಾನ ಪಿತಾಮಹ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜನವರಿ 26ರಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ ತಯಾರಿ ಮಾಡಿಕೊಳ್ಳಲಾಗಿದ್ದು, ನಾಳೆ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!