February 4, 2026

ವಿಟ್ಲ: ಜೇಸಿ ಶಾಲೆ: ಗಣರಾಜ್ಯೋತ್ಸವ ಆಚರಣೆ

0
image_editor_output_image-1350785132-1706246185574

ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ   75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಯರಾಮ ರೈ ಯವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಸಮಾಜ ಶಿಕ್ಷಕಿ ರೇಖಾ ಪಿ ಯವರು ಮಾತನಾಡಿ ಸಂವಿಧಾನದ ರಚನೆ, ಗಣರಾಜ್ಯದ ಅರ್ಥ, ವಿವರಣೆ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ನಾವು ಉಳಿಸಿಕೊಳ್ಳಬೇಕಾದ ಕಾಳಜಿಯ ಬಗ್ಗೆ  ವಿವರಿಸಿದರು.
ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಶಾಲಾ ಆಡಳಿತಾಧಿಕಾರಿ ರಾಧಾಕೃಷ್ಣ ಎ, ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ ಹಾಗೂ ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!