May 6, 2026

ಮನೆಯಲ್ಲಿ ಬೆಂಕಿ ಅವಘಡ: 9 ತಿಂಗಳ ಮಗು ಸೇರಿದಂತೆ ನಾಲ್ವರು ಉಸಿರುಗಟ್ಟಿ ಸಾವು

0
image_editor_output_image-918375872-1706332554468.jpg

ನವದೆಹಲಿ: ಶಹದಾರ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದ ನೆಲ ಮಹಡಿಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂಬತ್ತು ತಿಂಗಳ ಹೆಣ್ಣು ಮಗು ಸೇರಿದಂತೆ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಶಹದಾರ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ 5:22 ಕ್ಕೆ ಕರೆ ಬಂದಿತ್ತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಸಂಜೆ 6:55 ರ ಹೊತ್ತಿಗೆ ಬೆಂಕಿಯನ್ನು ನಂದಿಸಲಾಯಿತು.

ಕಟ್ಟಡದ ನೆಲ ಅಂತಸ್ತಿನ ಮನೆಯೊಂದರಲ್ಲಿ ಇರಿಸಲಾಗಿದ್ದ ವೈಪರ್‌ಗಳು ಮತ್ತು ರಬ್ಬರ್ ಕತ್ತರಿಸುವ ಯಂತ್ರದಂತಹ ರಬ್ಬರ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌

Leave a Reply

Your email address will not be published. Required fields are marked *

error: Content is protected !!