May 9, 2026

ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆ:
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜಿನಾಮೆ:

0
image_editor_output_image157388948-1706425346131

ಪಾಟ್ನಾ: ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಯಾಗಿದ್ದು, ಜೆಡಿಯು- ಆರ್ ಜೆಡಿ ಸಖ್ಯ ಅಧಿಕೃತವಾಗಿ ಮುರಿದು ಬಿದ್ದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಬೆಳಗ್ಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಹಾರದಲ್ಲಿ ಆರ್ ಜೆಡಿ – ಜೆಡಿಯು ಸರ್ಕಾರ ಪತನವಾಗಿದ್ದು, ನೂತನವಾಗಿ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರ ರಚನೆಯಾಗಲಿದೆ. ಹೊಸ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಸಂಜೆಯೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಪಣತೊಟ್ಟಂತಿದ್ದ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಜತೆ ಮುಂಚೂಣಿಯಲ್ಲಿ ನಿಂತು ಇಂಡಿಯಾ ಮೈತ್ರಿಕೂಟ ರಚನೆಗೆ ಕಾರಣರಾಗಿದ್ದರು. ಅದೇ ನಿತೀಶ್ ಕುಮಾರ್ ಬಿಜೆಪಿ ಜತೆಗೆ ಸೇರಿಕೊಂಡಿರೋದು ರಾಜಕೀಯದಲ್ಲಿ ಹೇಗೂ ಆಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿದೆ..

Leave a Reply

Your email address will not be published. Required fields are marked *

error: Content is protected !!