September 26, 2026

ಮಾಜಿ ಶಾಸಕ ನಾಗನಗೌಡ ಕಂದಕೂರು ಹೃದಯಾಘಾತದಿಂದ ನಿಧನ

0
IMG-20240128-WA0001.jpg



ಯಾದಗಿರಿ: ಜಿಲ್ಲೆಯ ಗುರುಮಠಕಲ್‌ನ ಮಾಜಿ ಶಾಸಕ ನಾಗನಗೌಡ ಕಂದಕೂರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.


ನಾಗನಗೌಡ ಕಂದಕೂರು (79) ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗುರುಮಠಕಲ್‌ನ ಹಾಲಿ ಶಾಸಕ ಶರಣಗೌಡ ಕಂದಕೂರು ಅವರ ತಂದೆಯಾಗಿರುವ ನಾಗನಗೌಡ ಕಂದಕೂರು 2018ರಲ್ಲಿ ಗುರುಮಠಕಲ್ ಕ್ಷೇತ್ರದಿಂದ ಜೆಡಿಎಸ್ (JDS) ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಇವರ ನಿಧನ ಸುದ್ದಿ ತಿಳಿದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅಭಿಮಾನಿ ಬಳಗ ಆಸ್ಪತ್ರೆಗೆ ಧಾವಿಸಿದೆ.

ಭಾನುವಾರ (ಜ.28) ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 11 ಗಂಟೆಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!