May 9, 2026

ಬೆಳ್ತಂಗಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಫೋಟ: ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

0
n5782244201706450771630e6f1ca8a67073d32501da9d7bd56cd9f66ef25165fc99562872d93f657aea8e8.jpg

ಬೆಳ್ತಂಗಡಿ: ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರುವಿನಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಸಂಭವಿಸಿದೆ.

ವೇಣೂರಿನ ಕುಕ್ಕೇಡಿ ಗ್ರಾಮದ ಕಟ್ಯಾರು ಬಳಿ ಬಶೀರ್ ಎಂಬುವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ಸ್ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

55 ವರ್ಷದ ಸ್ವಾಮಿ ಹಾಗೂ ಮತ್ತೊಬ್ಬ ಕಾರ್ಮಿಕರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!