ಇನ್ನೋವಾ ಕಾರಿನ ಟಯರ್ ಬ್ಲ್ಯಾಸ್ಟ್ ಆಗಿ ಆಟೋಗೆ ಢಿಕ್ಕಿ

ಬೆಂಗಳೂರು: ಅತಿ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರಿನ ಟಯರ್ ಬ್ಲಾಸ್ಟ್ ಆಗಿ ನೋಡು ನೋಡುತ್ತಿದ್ದಂತೆ ಪಾರ್ಕ್ ಮಾಡಿದ್ದ ಆಟೋಗೆ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮನೆಯ ಕಾಂಪೌಂಡ್ ಪುಡಿ ಪುಡಿ ಆಗಿ ಬಿದ್ದಿದೆ.
ಬೆಂಗಳೂರಿನ ಲಾಲ್‍ಬಾಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಅಪಘಾತದ ಭಯನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಖಾಲಿ ರಸ್ತೆಯಲ್ಲಿ ಅತಿ ವೇಗವಾಗಿ ಲಾಲ್‍ಬಾಗ್ ರಸ್ತೆ ಮೂಲಕ ಜಯ ನಗರದ ಕಡೆ ಹೋಗುತ್ತಿದ್ದ ಕಾರ್ ನ ಟಯರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ಆದ ಕ್ಷಣದಲ್ಲೇ ಯಮ ಸ್ವರೂಪಿಯಂತೆ ಕಾರು ನುಗ್ಗಿದ್ದು, ಕೂದಲೆಳೆ ಅಂತರಲ್ಲಿ ವೃದ್ಧ ಪಾರಾಗಿದ್ದಾರೆ.