March 19, 2026

ಮಂಗಳೂರು: ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ: ಅನುಮತಿಗಾಗಿ ಪೊಲೀಸ್ ಠಾಣೆಗೆ ಬರಬೇಡಿ: ಎಸ್.ಪಿ ರಿಷ್ಯಂತ್

0
image_editor_output_image-455771445-1706614599651.jpg

ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸಲು ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದರು.

ಇನ್ನು ಮುಂಬರುವ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!