ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ: ಬಂಧಿತರಿಗೆ ಫೆ.5ರವರೆಗೆ ಪೊಲೀಸ್ ಕಸ್ಟಡಿ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯ ಕಡ್ತ್ಯಾರ್ ನಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಸಿಡಿಮದ್ದು ಘಟಕದ ಮಾಲೀಕ ಸೈಯ್ಯದ್ ಬಶೀರ್ ಮತ್ತು ಕಿರಣ್ ಗೆ ಬೆಳ್ತಂಗಡಿ ಜೆ ಎಂ ಎಫ್ ಸಿ ನ್ಯಾಯಾಲಯ ಫೆ.5ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ.
ಕುಕ್ಕೇಡಿಯ ಬಶೀರ್ ಎಂಬವರ ಜಮೀನಿನಲ್ಲಿದ್ದ ಪಟಾಕಿ ತಯಾರಿಕಾ ಘಟಕದಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಪಟಾಕಿ ತಯಾರಿಸುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಕೇರಳದ ಸ್ವಾಮಿ (55), ವರ್ಗೀಸ್ (68), ಹಾಗೂ ಹಾಸದ ಅರಸೀಕೆರೆ ಮೂಲದ ಚೇತನ್ (25) ಸೇರಿ ಮೂವರು ಸಾವನ್ನಪ್ಪಿದ್ದರು.
‘ಸಾಲಿಡ್ ಫೈರ್ ವರ್ಕ್ಸ್’ ಎಂಬ ಈ ಪಟಾಕಿ ತಯಾರಿಕೆ ಘಟಕ ಹಲವಾರು ವರ್ಷಗಳಿಂದ ಇಲ್ಲಿದ್ದು, ಇಲ್ಲಿ ಪಟಾಕಿ ತಯಾರಿಸಿ ಹಲವಾರು ಜಾತ್ರೆ ಹಾಗೂ ಇತರ ಕಾರ್ಯಕ್ರಮಗಳಿಗೆ ಪೂರೈಸುತ್ತಿದ್ದರು ಎನ್ನಲಾಗಿದೆ.