ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ನಡೆಸಿದ ಲೊಕಾಯುಕ್ತ ಅಧಿಕಾರಿಗಳು ಅಧಿಕಾರಿಗಳ ಆಸ್ತಿ ವಿವರ ಪರಿಶೀಲಿಸುತ್ತಿದ್ದಾರೆ.
ಮಂಗಳೂರಿನಲ್ಲೂ ಲೋಕಾಯುಕ್ತ ದಾಳಿ ನಡೆದಿದ್ದು, ಮೆಸ್ಕಾಂ ಅಧಿಕಾರಿಯ ಮನೆಯಲ್ಲಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮಂಗಳೂರಿನ ಅತ್ತಾವರ ವಿಭಾಗದ ಮೆಸ್ಕಾಂ ಇಇ ಶಾಂತಕುಮಾರ್ ಅವರ ಮಂಗಳೂರಿನ ಮನೆ, ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಶಾಂತಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಕಳೆದ ಐದಾರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸಿತ್ತಿರುವ ಶಾಂತಕುಮಾರ್ ಮೇಲೆ ಹಲವು ಆರೋಪ ಕೇಳಿ ಬಂದಿದ್ದು, ಆದಾಯ ಮೀರಿ ಅಸ್ತಿ ಗಳಿಕೆ ಆರೋಪದಡಿ ದಾಳಿ ಮಾಡಲಾಗಿದೆ.





