ತೋಷಖಾನಾ ಪ್ರಕರಣ: ಇಮ್ರಾನ್ ಖಾನ್ ಪತ್ನಿಗೆ 14 ವರ್ಷಗಳ ಜೈಲು ಶಿಕ್ಷೆ
ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಬುಧವಾರ ನ್ಯಾಯಾಲಯವು 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ದಂಪತಿಗೆ 14 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ.
ಸೋರಿಕೆಯಾದ ದಾಖಲೆಗೆ ಸಂಬಂಧಿಸಿದ ವಿವಾದಾತ್ಮಕ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಈ ಘಟನೆ ಬಳಿಕ ಈ ಮಹತ್ವದ ತೀರ್ಪು ಹೊರಬಿದ್ದಿದೆ. ಸೈಫರ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.





