Paytm ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ನೋಟಿಸ್ ಜಾರಿ
ಬೆಂಗಳೂರು: ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ ಹಿನ್ನೆಲೆ ಪೇಟಿಎಂಗೆ ಆರ್‌ಬಿಐನೋಟಿಸ್ ನೀಡಿದ್ದು, ಪೇಟಿಎಂ ಹೊಸ ಡೆಪಾಸಿಟ್ ಪಡೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ ಹೇರಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ. ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ನೋಟಿಸ್ ನೀಡಲಾಗಿದೆ.





