ಬಸ್ ಕಂಡಕ್ಟರ್ ಗೆ ನಿಂದಿಸಿ ಹಲ್ಲೆ ಮಾಡಿದ ಮಹಿಳೆ
ಮದ್ಯದ ಅಮಲಿನಲ್ಲಿದ್ದ ಮಹಿಳೆಯೊಬ್ಬರು ಬಸ್ ಕಂಡಕ್ಟರ್ ಒಬ್ಬರನ್ನು ನಿಂದಿಸಿ ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಅಷ್ಟೇ ಅಲ್ಲದೆ ಸಹ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ನಲ್ಲಿ ಮಹಿಳೆ ಕೆಟ್ಟದಾಗಿ ವರ್ತಿಸಿರುವ ಘಟನೆ ನಡೆದಿದೆ.
ಬಸ್ ಕಂಡಕ್ಟರ್ ಮೇಲೆ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ದೈಹಿಕ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ.




