ಆಯುಷ್ಮಾನ್ ಭಾರತ ಯೋಜನೆ ವಿಸ್ತರಣೆ: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಅನ್ವಯ
ಆಯುಷ್ಮಾನ್ ಭಾರತ ಯೋಜನೆಯನ್ನು ವಿಸ್ತರಿಸಲಾಗುವುದು. ಈ ಯೋಜನೆ ಇನ್ನುಮುಂದೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೂ ಅನ್ವಯವಾಗಲಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.
ಕೇಂದ್ರ ಬಜೆಟ್ ಮಂಡಿಸಿ, ಹೊಸ ಮೂನುಗಾರಿಕಾ ಸಚುವಾಲಯ ಘೋಷಿಸಿದರು.ನವೋದ್ಯಮಗಳಲ್ಲಿ ಅವಕಾಶ ಕಲ್ಪಿಸುವ ಮೂಲಕ, ಮಹಿಳೆಯರ ಘನತೆ ಮತ್ತು ಬದುಕಿನಲ್ಲಿ ಸುಧಾರಣೆಗಳನ್ನು ತರುವ ಮೂಲಕ ಕಳೆದ 10 ವರ್ಷಗಳಲ್ಲಿ ಸ್ತ್ರೀ ಸಬಲೀಕರಣಕ್ಕೆ ವೇಗ ದೊರೆತಿದೆ. ‘ಸ್ಕಿಲ್ ಇಂಡಿಯಾ’ ಯೋಜನೆ ಅಡಿಯಲ್ಲಿ 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದೆ.
ದೇಶದ ಜನರ ಸರಾಸರಿ ಆದಾಯ ಶೇ 50ರಷ್ಟು ಏರಿಕೆಯಾಗಿದೆ. ದೇಶದ ಆರ್ಥಿಕತೆ ಕಳೆದ 10 ವರ್ಷಗಳಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಂಡಿದೆ. ದೇಶದ ಜನರು ಭರವಸೆ ಮತ್ತು ಆಶಾದಾಯಕ ಭವಿಷ್ಯವನ್ನು ಎದುರು ನೋಡುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜನರ ಆಶೀರ್ವಾದದೊಂದಿಗೆ ‘ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್’ ಮಂತ್ರದೊಂದಿಗೆ 2014ರಲ್ಲಿ ರಚನೆಯಾದಾಗ ರಾಷ್ಟ್ರವು ಅಪರಿಮಿತ ಸವಾಲುಗಳನ್ನು ಎದುರಿಸುತ್ತಿತ್ತು. ಎಲ್ಲಾ ಸವಾಲುಗಳನ್ನು ನಮ್ಮ ಸರ್ಕಾರ ಮೀರಿ ನಿಂತಿದೆ ಎಂದರು.




