March 21, 2026

ಸುಳ್ಯ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

0
image_editor_output_image573754766-1706777194270.jpg

ಸುಳ್ಯ: ಯುವಕನೋರ್ವ ಬೈಕ್ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಪಂಜದ ಹರಿಹರ ಪಲ್ಲತ್ತಡ್ಕ ಸಮೀಪ ಮಲ್ಲಾರ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಪಂಜ ಸಮೀಪದ ಕೂತ್ಕುಂಜ ಗ್ರಾಮದ ಕಲ್ಕ ಗೋಪಾಲ ಮತ್ತು ಶ್ರೀಮತಿ ದೇವಕಿ ದಂಪತಿ ಪುತ್ರ ಚಿದಾನಂದ (37) ಎಂದು ಗುರುತಿಸಲಾಗಿದೆ.

ಚಿದಾನಂದ ಅವರು ರಾತ್ರಿ ಹರಿಹರದ ಕಡೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಈ ವೇಳೆ ಮನೆಗೆ ತೆರಳುತ್ತಿದ್ದಾಗ ಹರಿಹರ ಸಮೀಪ ಮಲ್ಲಾರ ಎಂಬಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದೆ. ಇದೇ ವೇಳೆ ಅದೇ ಮಾರ್ಗವಾಗಿ ವಾಹನವೊಂದರಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಆ್ಯಂಬುಲೆನ್ಸ್ ನಲ್ಲಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಅವರ ಮನೆಯವರಿಗೆ ತಿಳಿಸಿದ್ದಾರೆ.

ರಾತ್ರಿ ಮನೆಯವರು ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಚಿದಾನಂದ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!