March 21, 2026

ಪುತ್ತೂರು: ಬಾಲಕಿ ನಾಪತ್ತೆಯಾದ ಪ್ರಕರಣ ಸುಖಾಂತ್ಯ: ಫಾತಿಮಾ ಅಫ್ನಾ ಕಾಸರಗೋಡಿನಲ್ಲಿ ಪತ್ತೆ

0
IMG-20240201-WA0047.jpg

ಪುತ್ತೂರು: ಶಾಲೆಗೆಂದು ತೆರಳಿ ನಾಪತ್ತೆಯಾಗಿದ್ದ ಬಾಲಕಿ ಫಾತಿಮಾ ಅಫ್ನಾ ಇದೀಗ ಕಾಸರಗೋಡಿನಲ್ಲಿ ಪತ್ತೆಯಾಗಿದ್ದಾಳೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಫಾತಿಮಾ ಅಫ್ನಾ ಮನೆಯಿಂದ ಶಾಲೆಗೆಂದು ತೆರಳಿದ್ದು, ಆದರೆ ಶಾಲೆಗೆ ಹೋಗಿರಲಿಲ್ಲ. ಇಂದು ಶಾಲೆಯಲ್ಲಿ ಪರೀಕ್ಷೆ ಇತ್ತು ಎನ್ನಲಾಗಿದ್ದು, ಅಫ್ನ ಶಾಲೆಗೆ ಹೋಗದೆ ನೇರವಾಗಿ ಪರ್ಲಡ್ಕದ ಬಾಲವನಕ್ಕೆ ತೆರಳಿದ್ದಳು. ಐಡಿ ಕಾರ್ಡ್‌ ಇಲ್ಲದ ಕಾರಣ ಬಾಲವನದ ಸಿಬ್ಬಂದಿ ಆಕೆಯನ್ನು ಒಳಗೆ ಬಿಟ್ಟಿರಲಿಲ್ಲ. ಅಲ್ಲಿಂದ ಹಿಂದಿರುಗಿ ಬಂದ ಅಫ್ನ ಪರ್ಲಡ್ಕದಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ತೆರಳಿ ನಾನು ಶಾಲೆಗೆ ಹೋಗಿಲ್ಲ, ಇಂದು ಇಲ್ಲಿ ಇರುವುದಾಗಿ ಹೇಳಿದ್ದಾಳೆ.

ಇನ್ನು ಸಂಬಂಧಿಕರ ಮನೆಮಂದಿ ಆಕೆಯನ್ನು ಶಾಲೆಗೆ ಬಿಟ್ಟು ಬರಲು ಮುಂದಾದಾಗ ಅಫ್ನ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. ಮನೆಯ ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದರೂ ಆಕೆ ಕಾಣಸಿಕ್ಕಿರಲಿಲ್ಲ. ಸಂಬಂಧಿಕರಿಂದ ಮಾಹಿತಿ ಪಡೆದ ಮನೆಯವರು ಬೆಳಗ್ಗಿನಿಂದಲೇ ಅಫ್ನಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆದರೆ ಅಫ್ನ ಎಲ್ಲಿಯೂ ಪತ್ತೆಯಾಗಿಲ್ಲ.

ಬಳ್ಕಾಡ್ ನಿವಾಸಿ ಅಶ್ರಫ್‌ ಎಂಬವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಫಾತಿಮಾ ಅಫ್ನ ನಾಪತ್ತೆಯಾಗಿರುವುದಾಗಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಫಾತಿಮಾ ಅಫ್ನ ಕಾಸರಗೋಡಿನಲ್ಲಿ ಪತ್ತೆಯಾಗಿದ್ದು, ಪುತ್ತೂರಿಗೆ ಕರೆತರಲು ಮನೆಮಂದಿ ಪೊಲೀಸರೊಂದಿಗೆ ಕಾಸರಗೋಡಿಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!