August 11, 2026

ಸ್ಕೂಟರ್‌ಗೆ ಬಸ್ ಢಿಕ್ಕಿ:  ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಸಾವು

0
image_editor_output_image1030972360-1706862624956.jpg

ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.

ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸುಮಿತ (22) ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ.

ಕೂಡಲೇ ಆಕೆಯನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.

Leave a Reply

Your email address will not be published. Required fields are marked *

error: Content is protected !!