March 21, 2026

ಗುಡಿಸಲಿನಲ್ಲಿ ಮಲಗಿದ್ದ ಮಗುವನ್ನು ಕೊಂದು ತಿಂದ ಬೀದಿ ನಾಯಿಗಳು

0
IMG-20240202-WA0003.jpg



ಹೈದರಾಬಾದ್: ಗುಡಿಸಲಿನಲ್ಲಿ ಮಲಗಿದ್ದ ಒಂದು ವರ್ಷ ಮಗು ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ತಿಂದಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಕೆ. ನಾಗರಾಜು (1) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಮಗುವಿನ ತಂದೆ ಸೂರ್ಯಕುಮಾರ್ ಶಂಶಾಬಾದ್‌ನ ರಾಜೀವ್ ಗೃಹಕಲ್ಪ ಸಂಕೀರ್ಣದ ಬಳಿ ಗುಡಿಸಲಿನಲ್ಲಿ ಹಿರಿಯ ಮಗನಾದ ನಾಗರಾಜು ಹಾಗೂ 20 ದಿನದ ಮಗುವಿನ ಜೊತೆ ಮಲಗಿದ್ದರು.

ಈ ವೇಳೆ ಬೀದಿ ನಾಯಿಗಳ ಗುಂಪು ಗುಡಿಸಲಿಗೆ ನುಗ್ಗಿ ಮಕ್ಕಳ ಮೇಲೆ ದಾಳಿ ನಡೆಸಿವೆ.

ಮಗುವಿನ ತಂದೆಯಾದ ಸೂರ್ಯಕುಮಾರ್‌ ಅವರನ್ನು ಸ್ಥಳೀಯರು ರಾತ್ರಿ 1:30 ಎಬ್ಬಿಸಿ ಬೀದಿ ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ನಡೆಸಿ ತಿನ್ನುತ್ತಿದ್ದವು ಎಂದು ತಿಳಿಸಿದ್ದಾರೆ.

ವಿಷಯ ತಿಳಿದ ಸೂರ್ಯ ಹೋಗಿ ನೋಡಿದಾಗ ನಾಯಿಗಳು ಮಗು ಅದಾಗಲೇ ನಾಯಿಯ ಪಾಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!