March 21, 2026

ಶಿವಸೇನೆ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ

0
image_editor_output_image-1263131591-1706937505827.jpg

ಮುಂಬಯಿ: ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ಶಿವಸೇನೆ ಮುಖಂಡ ಮಹೇಶ್ ಗಾಯಕ್ವಾಡ್ ಮೇಲೆ ಬಿಜೆಪಿ ಶಾಸಕ ಗಣೇಶ್ ಗಾಯಕ್ವಾಡ್ ಗುಂಡು ಹಾರಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರುವ ತನಕ ಹೋಗಿತ್ತು ಅದರಂತೆ ಇಬ್ಬರು ರಾಜಕಾರಣಿಗಳು ಪರಸ್ಪರ ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ತೆರಳಿದ್ದಾರೆ ಅಲ್ಲದೆ ಈ ವೇಳೆ ಇಬ್ಬರು ರಾಜಕಾರಣಿಗಳ ಬೆಂಬಲಿಗರೂ ಕೂಡ ಅಲ್ಲಿ ಸೇರಿದ್ದರು.

ಈ ನಡುವೆ ಎರಡು ಕಡೆಯವರ ನಡುವೆ ವಾಗ್ವಾದ ನಡೆಯಿತು ಮತ್ತು ಗಣೇಶ್ ಗಾಯಕ್ವಾಡ್ ಅವರು ಮಹೇಶ್ ಗಾಯಕ್ವಾಡ್ ಮೇಲೆ ನಾಲ್ಕು ಸುತ್ತಿನ ಗುಂಡುಗಳನ್ನು ಹಾರಿಸಿದ್ದಾರೆ ಅಲ್ಲದೆ ಘಟನೆಯಲ್ಲಿ ಶಿವಸೇನೆ ಶಾಸಕ ರಾಹುಲ್ ಪಾಟೀಲ್ ಕೂಡ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಗಾಯಗೊಂಡ ಇಬ್ಬರನ್ನು ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಗುಂಡು ಹಾರಿಸಿದ ಗಣಪತ್ ಗಾಯಕ್ವಾಡ್ ಅವರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ ಜೊತೆಗೆ ಅವರು ಬಳಸಿದ ಗನ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!