ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಅವರು ಒಬ್ಬರಾಗಿದ್ದು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಶನಿವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.