March 21, 2026

ನಾನು ಕ್ಯಾನ್ಸರ್‌ನಿಂದ ಮೃತಪಟ್ಟಿಲ್ಲ, ಜೀವಂತವಾಗಿದ್ದೇನೆ: ನಟಿ‌ ಪೂನಂ ಪಾಂಡೆ

0
image_editor_output_image-1081119267-1706951383707.jpg

ನವದೆಹಲಿ: ಮಾಡೆಲ್ ಕಂ ರಿಯಾಲಿಟಿ ಶೋ ಕಿರುತೆರೆ ತಾರೆ ಪೂನಂ ಪಾಂಡೆ ಇಂದು ಇದ್ದಕ್ಕಿದ್ದಂತೆ ತಾನು ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿಲ್ಲ, ಜೀವಂತವಾಗಿದ್ದೇನೆ ಎಂದು ವಿಡಿಯೊ ಮಾಡಿ ಪೋಸ್ಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಪೂನಂ ಪಾಂಡೆ ಮ್ಯಾನೇಜರ್ ನಿನ್ನೆ ಇನ್ಸ್ಟಾಗ್ರಾಂ ಪೋಸ್ಟ್ ಹಾಕಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಲು ಅತೀವ ದುಃಖವಾಗುತ್ತಿದೆ ಎಂದಿದ್ದರು.

ಇದಾಗಿ ದಿನ ಕಳೆಯುವುದರಲ್ಲಿ ಇಂದು ಪೋಸ್ಟ್ ಮಾಡಿರುವ ನಟಿ ಪೂನಂ ಪಾಂಡೆ “ನಾನು ಜೀವಂತವಾಗಿದ್ದೇನೆ. ನಾನು ಗರ್ಭಕಂಠದ ಕ್ಯಾನ್ಸರ್ ನಿಂದ ಸತ್ತಿಲ್ಲ. ದುರದೃಷ್ಟವಶಾತ್, ಗರ್ಭಕಂಠದ ಕ್ಯಾನ್ಸರ್‌ನಿಂದ ನೂರಾರು, ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ನಿಮ್ಮೆಲ್ಲರಿಗೂ ಆಘಾತ ಕೊಟ್ಟದ್ದಕ್ಕಾಗಿ ನನ್ನನ್ನು ಕ್ಷಮಿಸಿ, ನಾನು ನೋಯಿಸಿದವರಿಗೆ ಕ್ಷಮೆಯಾಚಿಸುತ್ತೇನೆ. ಗರ್ಭಕಂಠದ ಕ್ಯಾನ್ಸರ್ ನಿಂದ ಅಷ್ಟೊಂದು ಮಹಿಳೆಯರು ತೊಂದರೆ ಅನುಭವಿಸುತ್ತಿದ್ದರೂ ನಾವು ಆ ಬಗ್ಗೆ ಮಾತನಾಡುವುದೇ ಇಲ್ಲ, ನಮ್ಮಲ್ಲಿ ಅನೇಕರಿಗೆ ಅದರ ಬಗ್ಗೆ ಅರಿವು ಇಲ್ಲ, ಅದರ ಬಗ್ಗೆ ಜಾಗೃತಿ ಮೂಡಿಸುವುದು ನನ್ನ ಉದ್ದೇಶವಾಗಿತ್ತು ಎಂದು ವಿಡಿಯೊದಲ್ಲಿ ಹೇಳಿಕೊಂಡಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!