March 21, 2026

ಬಂಟ್ವಾಳ: ರೈಲು ಢಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲಿ ಮೃತ್ಯು

0
image_editor_output_image-1315910998-1707114755117.jpg

ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಬಿಸಿರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ ಫೆ.5 ಬೆಳಿಗ್ಗೆ ಸುಮಾರು 7.30 ಗಂಟೆಗೆ ಸಂಭವಿಸಿದೆ.
ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು, ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ.
ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟುವ ಉದ್ದೇಶದಿಂದ ನಿಂತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿರಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.

ರೈಲು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಹರಿಶ್ಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದರು

Leave a Reply

Your email address will not be published. Required fields are marked *

You may have missed

error: Content is protected !!