February 2, 2026

ಚಿಕ್ಕಮಗಳೂರು: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ

0
image_editor_output_image-397523298-1707204608486.jpg

ಚಿಕ್ಕಮಗಳೂರು: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನೋರ್ವ ಕೌಟುಂಬಿಕ ಸಮಸ್ಯೆ ಕಾರಣದಿಂದ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ.

ವಿನೋದ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದ ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!