ಬಿಜೆಪಿಗೆ ಮತ ಹಾಕಿದರೆ ಅದು ಶ್ರೀರಾಮನಿಗೆ ಮತ ಹಾಕಿದಂತೆ: ಬಿಜೆಪಿ ನಾಯಕ ಕಾಗೇರಿ
ಕಾರವಾರ: ಬಿಜೆಪಿಗೆ ನೀವು ಮತ ಹಾಕಿದರೆ ಅದು ರಾಮನಿಗೆ ಹಾಗೂ ಪ್ರಧಾನಿ ಮೋದಿಗೆ ಮತ ಹಾಕಿದಂತೆ ಎಂದು ಬಿಜೆಪಿ ನಾಯಕ, ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಕಾರ್ಯರ್ತರಿಗೆ ಕರೆ ನೀಡಿದ್ದಾರೆ. ಉತ್ತರ ಕನ್ನಡ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸದಲ್ಲಿ ಚುನಾವಣೆ ಆರಂಭಕ್ಕೂ ಮುನ್ನ ರಾಮನ ಹೆಸರಿನಲ್ಲಿ ಪ್ರಚಾರ ಆರಂಭಿಸಿದ್ದಾರೆ.





