March 21, 2026

ಮಂಗಳೂರು: ಕಡಲಾಮೆ ಮೊಟ್ಟೆ ಪತ್ತೆ ಹಚ್ಚಿದ ಮೀನುಗಾರರಿಗೆ ಬಹುಮಾನ

0
image_editor_output_image-929333884-1707291181489.jpg

ಮಂಗಳೂರು: ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ವರದಿ ಸಿದ್ಧಪಡಿಸುವಂತೆ ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯ ಕಚೇರಿಯಲ್ಲಿ ಮಂಗಳವಾರ ನಡೆದ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾತನಾಡಿದರು.

ತಣ್ಣೀರುಬಾವಿಯ ಕಡಲ ತೀರದಲ್ಲಿ ಅಪರೂಪದ ಆಲಿವ್ ರೆಡ್ಲಿ ಕಡಲಾಮೆ ಮೊಟ್ಟೆ ಇಟ್ಟಿರುವುದನ್ನು ಪತ್ತೆ ಮಾಡಿ ಸಂರ ಕ್ಷಣೆಗೆ ನೆರವಾದ ಸಸಿಹಿತ್ಲು ಗ್ರಾಮದ ಮೀನುಗಾರರಾದ ಆನಂದ ಕೋಟ್ಯಾನ್ ಮತ್ತು ವಾಸು ಕೋಟ್ಯಾನ್‌ಗೆ ಸಚಿವರು ೫ ಸಾವಿರ ರೂ. ಬಹುಮಾನ ಮತ್ತು ಪ್ರಶಂಸಾ ಪತ್ರ ಪ್ರದಾನ ಮಾಡಿದರು.

Leave a Reply

Your email address will not be published. Required fields are marked *

You may have missed

error: Content is protected !!