March 21, 2026

ಮಂಗಳೂರು: ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

0
n5813293161707379931674e05eab125b31169578133752fa171900c8cebd75ce3d4cc8451fa95fdcb7b555.jpg

ಮಂಗಳೂರು: ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಹಾಸ್ಟೆಲ್ ನ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬುಧವಾರ ನಡೆದಿರುವುದಾಗಿ ತಿಳಿದು ಬಂದಿದೆ.

ಮಂಗಳೂರು ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಸ್ವಸ್ಥ ವಿದ್ಯಾರ್ಥಿಗಳ ಪೈಕಿ ಬಹುತೇಕ ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಲಾಗಿದೆ.

ಊಟದಲ್ಲಿ ಹುಳ ಬಿದ್ದು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಶಂಕೆ ವ್ಯಕ್ತವಾಗಿದೆ. ಕಾಲೇಜಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!