March 21, 2026

ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್: ವೈದರ ನಡೆಗೆ ವ್ಯಾಪಕ ಆಕ್ರೋಶ

0
image_editor_output_image-1393651244-1707455526173.jpg

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಸದ್ಯ ಡಾ.ಅಭಿಷೇಕ್ ಜೋಡಿಯ ಪ್ರಿ-ವೆಡ್ಡಿಂಗ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಜೊತೆಗೆ ವೈದ್ಯರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಜನ ಕಿಡಿಕಾರುತ್ತಿದ್ದಾರೆ.

ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಡವಟ್ಟು ಮಾಡಿಕೊಂಡವರು. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್‌ ಶೂಟ್‌ ಲೋಕೇಶನ್‌ ಮಾಡಿಕೊಂಡಿರುವ ಅಭಿಷೇಕ್‌, ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ.

ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!