March 21, 2026

ಉಡುಪಿ: ನಮಾಝ್ ವೇಳೆ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

0
IMG-20240209-WA0021.jpg

ಉಡುಪಿ: ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಮಾಝ್ ಪ್ರಾರ್ಥನೆ ಮಾಡುವ ವೇಳೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ.

ಮುಸ್ತಾಕ್ ಅವರು ಮಧ್ಯಾಹ್ನ ಜುಮಾ ನಮಾಝ್‌ಗಾಗಿ ಮಸೀದಿಗೆ ಬಂದಿದ್ದು, ಅಲ್ಲಿ ನಮಾಝ್ ಮಾಡುವ ವೇಳೆ ಹೃದಯಾಘಾತದಿಂದ ಅಲ್ಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಘಟನೆ ಮಸೀದಿಯ ಸಿಸಿಟಿವಿಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!