March 21, 2026

ಗೃಹಿಣಿಯ ಅನುಮಾನಾಸ್ಪದ ಸಾವು ಪ್ರಕರಣ: ಆರೋಪಿ ಪತಿಯ ಬಂಧನ 

0
image_editor_output_image620136610-1707542665218.jpg

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‌ನ ಗೃಹಿಣಿಯ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಪತಿಯೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು ಕಥೆ ರೋಚಕ ತಿರುವು ಪಡೆದುಕೊಂಡಿದೆ.

ಪ್ರೇಮಲತಾ (35) ಮೃತ ಗೃಹಿಣಿ. ಸಂಜೆ ಮಕ್ಕಳು ಶಾಲೆಯಿಂದ ವಾಪಸ್ ಮನೆಗೆ ಬಂದು ನೋಡಿದ್ದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಸಾವಿನ ಬಗ್ಗೆ ಹಲವಾರು ಅನುಮಾನಗಳಿಗೆ ಕಾರಣವಾಗಿತ್ತು. ಆಕೆಯ ಪತಿಯೇ ಕೊಲೆ ಮಾಡಿರುವುದಾಗಿ ಶಂಕೆ ಸಹ ವ್ಯಕ್ತವಾಗಿತ್ತು. ಆದರೆ ಈಗ ಪ್ರಕರಣದಲ್ಲಿ ಗಂಡನೇ ಕೊಲೆ ಮಾಡುವಂತೆ ಸ್ನೇಹಿತನಿಗೆ ಸುಪಾರಿ ಕೊಟ್ಟಿರುವ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.

ಪ್ಲ್ಯಾನ್ ಪ್ರಕಾರ ವಿನಯ್ ಮಂಗಳವಾರ ಕೊಲೆ ಮಾಡಲು ಶಿವಶಂಕರ್ ಮನೆಗೆ ಬಂದಿದ್ದ. ಶಿವಶಂಕರ್ ಅಂದು ಮನೆಯಲ್ಲಿದ್ದ ಎಲ್ಲ ಸಿಸಿಟಿವಿಗಳನ್ನು ಆಫ್ ಮಾಡಿ ಹೋಗಿದ್ದ. ಬಳಿಕ ಮನೆಗೆ ಬಂದ ವಿನಯ್ ಪ್ರೇಮಲತಾ ಅವರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಮೃತದೇಹವನ್ನು ನೇಣು ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಮನೆಗೆ ಬಂದ ಶಿವಶಂಕರ್ ಪತ್ನಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಿಲು ಪ್ರಯತ್ನಿಸಿದ್ದ,. ಆದರೆ ಇದೀಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!