September 26, 2026

ನಾಪತ್ತೆಯಾಗಿದ್ದ ರೈತ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image1939048749-1707543699216.jpg

ಶಿವಮೊಗ್ಗ: ಕಳೆದ ಎರಡು ದಿನಗಳಿಂದ ‌ನಾಪತ್ತೆಯಾಗಿದ್ದ ಗೊಂದಿ ಚಟ್ನಹಳ್ಳಿ‌ ರೈತ ಮಹೇಶ್(40) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿ ಪಕ್ಕದ ಮರದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಬ್ಯಾಂಕ್ ಸೇರಿದಂತೆ ಖಾಸಗಿಯಾಗಿ 15 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಚಿತ್ರಕಲಾ ಪರಿಷತ್ ಮುಂದಿನ ರಸ್ತೆಯಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿರುವಂತಹ ಘಟನೆ ನಡೆದಿದೆ. ತಕ್ಷಣವೇ ಪೊಲೀಸರು ಮತ್ತು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಗಾಯಾಳುಗಳನ್ನ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!