March 21, 2026

ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಕೋರಿ ನರಹಂತಕ ಪ್ರವೀಣ್ ಚೌಗಲೆ ಅರ್ಜಿ

0
image_editor_output_image180607528-1707554787451.jpg

ಉಡುಪಿ: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗುಲೆಯ ಪರೋಲ್ ಅರ್ಜಿಯನ್ನು ನ್ಯಾಯಾಲಯ ತಿರಸ್ಕರ ಮಾಡಿದೆ.

ಚೌಗುಲೆ ಸಲ್ಲಿಸಿದ್ದ ಪರೋಲ್ ಅರ್ಜಿಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿದೆ.

ಫೆಬ್ರವರಿ 1ರಂದು ನಿಧನರಾದ ಸಹೋದರನ ಧಾರ್ಮಿಕ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನಗೆ ಅವಕಾಶ ನೀಡಬೇಕು. ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡಬೇಕು ಎಂದು ಪ್ರವೀಣ್ ನ್ಯಾಯಾಲಯಕ್ಕೆ ಫೆಬ್ರವರಿ 8ರಂದು ಅರ್ಜಿ ಸಲ್ಲಿಸಿದ್ದ.

ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದಾರೆ. ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ ಎಂದಿದ್ದಾರೆ. ಈ ವಾದ ಪುರಸ್ಕರಿಸಿದ ಕೋರ್ಟ್ ನಿಂದ ಪರೋಲ್ ಅರ್ಜಿ ತಿರಸ್ಕೃತಗೊಂಡಿದೆ.

Leave a Reply

Your email address will not be published. Required fields are marked *

You may have missed

error: Content is protected !!