March 21, 2026

ಉದ್ಯೋಗ ಕೊಡಿಸುವ ನೆಪದಲ್ಲಿ ಸುಮಾರು 20 ಮಹಿಳೆಯರನ್ನು ವಂಚಿಸಿ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು

0
image_editor_output_image-1567755222-1707715274939.jpg

ಜೈಪುರ್: ಉದ್ಯೋಗ ಕೊಡಿಸುವ ನೆಪದಲ್ಲಿ ಸುಮಾರು 20 ಮಹಿಳೆಯರನ್ನು ವಂಚಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ರಾಜಸ್ಥಾನದ ಸಿರೋಹಿ ಮುನ್ಸಿಪಲ್ ಕೌನ್ಸಿಲ್‌ನ ಅಧ್ಯಕ್ಷ ಮಹೇಂದ್ರ ಮೇವಾಡ ಮತ್ತು ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಆರೋಪಿಗಳು ಸುಮಾರು 20 ಕ್ಕೂ ಹೆಚ್ಚು ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!