March 20, 2026

ಬಂಟ್ವಾಳ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

0
image_editor_output_image-489979105-1707803260767.jpg

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ

ಬಂದಿತರದ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಅಬ್ದುಲ್ ಮಜೀದ್ ಅವರ ಮಗ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಮೋಯ್ದು ಕುಂಞಿ ಅವರ ಮಗ ಇಬ್ರಾಹಿಂ ಎಂದು ತಿಳಿದು ಬಂದಿದೆ.

12-02-2024 ರಂದು ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷರಾದ ಮೂರ್ತಿ ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ ದಸ್ತಗಿರಿ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!