March 21, 2026

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟು ನಿಧನ

0
image_editor_output_image-122657184-1707803690528.jpg

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನ ಮಾಜಿ ಅಧ್ಯಕ್ಷ, ಸಹಕಾರ ರತ್ನ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕರಾಯ ಗ್ರಾಮದ ಬಿ. ನಿರಂಜನ್ ಬಾವಂತಬೆಟ್ಟು (75) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ.12ರಂದು ನಿಧನ ಹೊಂದಿದರು.

ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ತಣ್ಣೀರುಪಂಥ ಪ್ರಾಥಮಿಕ ಕೃಷಿ ಸಹ ಕಾರಿ ಸಂಘ ಆರಂಭಗೊಂಡ 1983ನೇ ಇಸವಿಯಿಂದ ಸುದೀರ್ಘ 41 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ದಕ್ಷಿಣ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!